Saturday 4th, February 2023
canara news

ಧರ್ಮಸ್ಥಳದಲ್ಲಿ 365 ಶಾಲೆಗಳಿಗೆ ಪೀಠೋಪಕರಣ ವಿತರಣೆ

Published On : 04 Dec 2022   |  Reported By : Rons Bantwal


ಉಜಿರೆ: ಶಿಕ್ಷಣ ಕ್ಷೇತ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ ಮಹತ್ವಪೂರ್ಣ ಹಾಗೂ ಭದ್ರ ಬುನಾದಿಯಾಗಿದ್ದು ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪ್ರತಿವರ್ಷ ಸುಮಾರು 400 ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯಗಳ ನಿರ್ಮಾಣ, ಶಿಕ್ಷಕರ ನೇಮಕಾತಿ, ಶಾಲಾ ಕಟ್ಟಡ ನಿರ್ಮಾಣ, ಆವರಣ ಗೋಡೆ, ಆಟದ ಮೈದಾನ ರಚನೆ, ಕ್ರೀಡಾ ಸಾಮಾಗ್ರಿಗಳ ಪೂರೈಕೆ ಮೊದಲಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗೆಡೆಯವರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಗ್ರಾಮೀಣ ಪ್ರದೇಶದ 365 ಸರ್ಕಾರಿ ಶಾಲೆಗಳಿಗೆ ಎರಡೂವರೆ ಕೋಟಿ ರೂ. ಮೊತ್ತದ 2770 ಜೊತೆ ಪೀಠೋಪಕರಣಗಳನ್ನು ವಿತರಿಸಿ ಮಾತನಾಡಿದರು.

ಪ್ರಸ್ತುತ ದೀರ್ಘ ಬಾಳಿಕೆ ಬರುವ ಹಾಗೂ ಹಗುರವಾದ ಫೈಬರ್ ಬೆಂಚು, ಡೆಸ್ಕ್‍ಗಳನ್ನು ಧರ್ಮಸ್ಥಳದ ವತಿಯಿಂದಲೆ ಶಾಲೆಗಳಿಗೆ ಸಾಗಾಟ ಮಾಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಈ ವರೆಗೆ 10,334 ಶಾಲೆಗಳಿಗೆ 65,144 ಜೊತೆ ಬೆಂಚು, ಡೆಸ್ಕ್‍ಗಳನ್ನು ಪೂರೈಸಿದ್ದು ಇದಕ್ಕಾಗಿ 21 ಕೋಟಿ 22 ಲಕ್ಷ ರೂ. ಪೂರಕ ಅನುದಾನ ನೀಡಲಾಗಿದೆ ಎಂದು ಹೆಗ್ಗಡೆಯವರು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್. ಹೆಚ್. ಮಂಜುನಾಥ್, ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಸಮುದಾಯ ಅಭಿವೃದ್ಧಿ ವಿಭಾಗದ ಆನಂದ ಸುವರ್ಣ ಮತ್ತು ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಉಪಸ್ಥಿತರಿದ್ದರು.
More News

ಶ್ರೀ ಸುಬ್ರಹ್ಮಣ್ಯ ಮಠÀದ ಬ್ರಹ್ಮಕಲಶಾಭಿಷೇಕ ; ಸಂಸದ ರಾಹುಲ್ ಶೆವ್ಹಾಲೆ ಭೇಟಿ
ಶ್ರೀ ಸುಬ್ರಹ್ಮಣ್ಯ ಮಠÀದ ಬ್ರಹ್ಮಕಲಶಾಭಿಷೇಕ ; ಸಂಸದ ರಾಹುಲ್ ಶೆವ್ಹಾಲೆ ಭೇಟಿ
ಡಾ| ಸೈಯ್ಯದ್ ನಝೀರ್‍ಗೆ ದಾದಾ ಸಾಹೇಬ್ ಪಾಲ್ಕೆಯ ಶಿವಾಜಿ ಮಹಾರಾಜ್ ಪ್ರಶಸ್ತಿ
ಡಾ| ಸೈಯ್ಯದ್ ನಝೀರ್‍ಗೆ ದಾದಾ ಸಾಹೇಬ್ ಪಾಲ್ಕೆಯ ಶಿವಾಜಿ ಮಹಾರಾಜ್ ಪ್ರಶಸ್ತಿ
ಸಯಾನ್‍ನ ಶ್ರೀಕೃಷ್ಣ ಮಂದಿರದಲ್ಲಿ ಮಂತ್ರಾಲಯಶ್ರೀಗಳಿಂದ ಅನ್ನದಾನ ಸೇವೆಗೆ ಚಾಲನೆ
ಸಯಾನ್‍ನ ಶ್ರೀಕೃಷ್ಣ ಮಂದಿರದಲ್ಲಿ ಮಂತ್ರಾಲಯಶ್ರೀಗಳಿಂದ ಅನ್ನದಾನ ಸೇವೆಗೆ ಚಾಲನೆ

Comment Here