Saturday 13th, July 2024
canara news

ಶ್ರೀಗಳೇ ಬರೆದ ಭಾವ ರಾಮಾಯಣದ ಧರ್ಮಭಾರತೀ ಸಂಚಿಕೆ ಲೋಕಾರ್ಪಣೆ

Published On : 24 Feb 2023   |  Reported By : media release


ರಾಮಾಯಣದಿಂದ ಪುರುಷಾರ್ಥದ ಪ್ರಾಪ್ತಿ: ರಾಘವೇಶ್ವರ ಶ್ರೀ

ಗೋಕರ್ಣ: ಎಲ್ಲ ಜೀವಿಗಳೂ ಬಯಸುವುದು ಸುಖವನ್ನು. ಆದರೆ ಸುಖವನ್ನು ಬಯಸುವುದು ಮಾತ್ರ ನಮ್ಮ ಕೈಯಲ್ಲಿದೆ. ಬಯಸಿದುದನ್ನು ಪಡೆಯುವುದು ನಮ್ಮ ಕೈಮೀರಿದೆ. ರಾಮಾಯಣವು ಇರುವ ಸುಖವನ್ನಲ್ಲದೆ, ಇಲ್ಲದ, ಕೈಮೀರಿದ ಸುಖವನ್ನೂ ಕರುಣಿಸುವಂಥದ್ದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಶ್ರೀಗಳೇ ಧರ್ಮಭಾರತೀ ಪತ್ರಿಕೆಯಲ್ಲಿ ಬರೆದಿರುವ ಭಾವ ರಾಮಾಯಣವನ್ನು ರಾಮಾರ್ಪಣಗೊಳಿಸಿ ಆಶೀರ್ವಚನ ನೀಡಿದರು.

ರಾಮಾಯಣವನ್ನು ಓದುವಾಗಲೇ ಶಬ್ದಗಳಲ್ಲಿ ಹೇಳಲಾರದ ಸುಖದ ಅನುಭವವಾಗುತ್ತದೆ. ರಾಮಾಯಣವು ತೋರಿದ ಹಾದಿಯಲ್ಲಿ ನಡೆದಾಗ ಜೀವನದಲ್ಲಿ ಅನ್ಯಾನ್ಯ ಸುಖಗಳು ಒದಗಿ ಬರುತ್ತವೆ. ರಾಮಾಯಣದ ಅವಲೋಕನವು ಪುಣ್ಯವನ್ನು ತಂದುಕೊಡುತ್ತದೆ. ಹೀಗೆ ರಾಮಾಯಣದ ಅನುಸಂಧಾನದಿಂದ ಮೂರು ಬಗೆಯ ಸುಖಗಳ ಪ್ರಾಪ್ತಿಯಾಗುತ್ತದೆ ಎಂದರು.

ರಾಮಾಯಣದ ಓದಿನಿಂದ ಜೀವಿಯು ಬಯಸುವ ಧರ್ಮ, ಅರ್ಥ, ಕಾಮ, ಮೋಕ್ಷಗಳೆಂಬ ಪುರುಷಾರ್ಥಗಳು ಲಭಿಸುತ್ತವೆ. ನಾಲ್ಕು ಪುರುಷಾರ್ಥಗಳನ್ನು ಹೊರತುಪಡಿಸಿ ಜೀವಿ ಏನನ್ನೂ ಬಯಸುವುದಿಲ್ಲ. ಏನನ್ನೇ ಬಯಸಿದರೂ ಅದು ಪುರುಷಾರ್ಥಗಳಲ್ಲೇ ಬರುತ್ತದೆ. ಹಾಗಾಗಿ ರಾಮಾಯಣದಿಂದ ಪುರುಷಾರ್ಥ ಸಿದ್ಧಿಸುತ್ತದೆ ಎಂದು ಬಣ್ಣಿಸಿದರು.

ಇಂದು ಜಗತ್ತು ಹಣದ ಹಿಂದೆ ಓಡುತ್ತಿದೆ. ರಾಮಾಯಣವನ್ನು ಪಠಿಸಿದರೆ ಸಂಪತ್ತೇ ನಮ್ಮೆಡೆಗೆ ಹರಿದು ಬರುತ್ತದೆ ಎಂದು ವಿಶ್ಲೇಷಿಸಿದರು.

ಧರ್ಮಭಾರತೀ ಸಂಪಾದಕ ಕೃಷ್ಣಾನಂದ ಶರ್ಮಾ ಪ್ರಸ್ತಾವಿಕವಾಗಿ ಮಾತನಾಡಿದರು. ಧರ್ಮಭಾರತೀಪತ್ರಿಕೆ ರಾಮಾರ್ಪಣಗೊಳಿಸಿದ ಶ್ರೀಗಳು ನಂತರ ಪತ್ರಿಕೆಯನ್ನು ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಮತ್ತು ಶಿಷ್ಯಭಕ್ತರಿಗೆ ಅನುಗ್ರಹಿಸಿ, ರಾಮಾಯಣ ಆಧರಿತ ಪಾಠ ಮಾಡಿದರು.

ವಿಶ್ವವಿದ್ಯಾಪೀಠದ ಲೋಕಸಂಪರ್ಕಾಧಿಕಾರಿ ಅಶ್ವಿನೀ ಉಡುಚೆ ಭಾವರಾಮಾಯಣದ ಮಹತ್ತ್ವವನ್ನು ವಿವರಿಸಿದರು. ಮಹಾಮಂಡಲದ ಅಧ್ಯಕ್ಷ ಆರ್, ಎಸ್ ಹೆಗಡೆ ಹರಗಿ, ಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ಶ್ರೀಭಾರತೀಪ್ರಕಾಶನದ ಅಧ್ಯಕ್ಷ ಸಚಿನ್, ಉಪಸಂಪಾದಕ ಗಣೇಶ ಕೃಷ್ಣ ಹೆಗಡೆ, ಪ್ರಸರಣ ಮಾರ್ಗದರ್ಶಕ ಮಹೇಶ ಚಟ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.
More News

ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
 ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ

Comment Here