Thursday 25th, April 2024
canara news

ಹಿರಿಯ ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಪತ್ರಕರ್ತ ಸೌರಭ' ರಾಜ್ಯ ಪ್ರಶಸ್ತಿ-2023

Published On : 24 Feb 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಫೆ.24: ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇದರ ವತಿಯಿಂದ ಕೊಡಮಾಡುವ ಪತ್ರಕರ್ತ ಸೌರಭ 2023 ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿರುತ್ತಾರೆಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಲಂಬಾಣಿ ಹೂವಿನಹಡಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.26 ರಂದು ಶ್ರೀ ಶಿವರಾಮ ಅವಧೂತರ ಆಶ್ರಮ, ಹೇಮಕೂಟ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನ ಮತ್ತು ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ.

ಕರ್ನಾಟಕ ರಾಜ್ಯದ ಪ್ರಮುಖ ದಿನ ಪತ್ರಿಕೆಗಳಲ್ಲಿ ಕಳೆದ 35 ವರ್ಷಗಳಿಂದ ಬಂಟ್ವಾಳ ತಾಲೂಕಿನಲ್ಲಿ ಪತ್ರಿಕಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಜಯಾನಂದ ಪೆರಾಜೆಯವರು ಪತ್ರಕರ್ತರಾಗಿ ಚಿರಪರಿಚಿತರು. 1986ರಲ್ಲಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಬಂಟ್ವಾಳದಲ್ಲಿ ವರದಿಗಾರರಾಗಿ ಪತ್ರಿಕಾರಂಗಕ್ಕೆ ಪ್ರವೇಶಿದ ಇವರು 1987 ರಲ್ಲಿ ಹೊಸದಿಗಂತ ದಿನ ಪತ್ರಿಕೆಯ ತಾಲೂಕು ವರದಿಗಾರರಾಗಿ ಪತ್ರಿಕಾ ಕ್ಷೇತ್ರದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1993 ರಲ್ಲಿ ಮುಂಗಾರು ದಿನ ಪತ್ರಿಕೆಯಲ್ಲಿ ಮೂರು ವರ್ಷ ದಿಟ್ಟ ವರದಿಗಾರರಾಗಿ ನಿರ್ಭೀತ ಪತ್ರಕರ್ತರೆನಿಸಿಕೊಂಡಿದ್ದರು. 1996 ರಿಂದ ಸಂಯುಕ್ತ ಕರ್ನಾಟಕ ದೈನಿಕದಲ್ಲಿ 5 ವರ್ಷ ಸುದ್ದಿ ಸಂಪಾದಕರಾಗಿ ಸೇವೆ ಸಲ್ಲಿಸಿದರು . 2000 ದಿಂದ 2009 ರವರೆಗೆ ಕನ್ನಡ ಪ್ರಭ ದಿನಪತ್ರಿಕೆಗಳಲ್ಲಿ 10 ವರ್ಷ ಬಂಟ್ವಾಳ ತಾಲೂಕು ವರದಿಗಾರರಾಗಿ ಜನಪ್ರಿಯರಾಗಿದ್ದರು. ಬಳಿಕ ಹೊಸದಿಗಂತ ದಿನ ಪತ್ರಿಕೆಯಲ್ಲಿ ವರದಿಗಾರರಾಗಿ ಸೇವೆಯನ್ನು ಮುಂದುವರಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಮುಖವಾಣಿ ಮಧುಪ್ರಪಂಚ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದಾರೆ.

ಬಂಟ್ವಾಳದಲ್ಲಿ ಆರಂಭವಾದ ನಮ್ಮ ಬಂಟ್ವಾಳ ಪತ್ರಿಕೆಯ ಉಪಸಂಪಾದಕರಾಗಿ, ಜನ ಈ ದಿನ, ನೇತ್ರಾವತಿ ವಾರ್ತೆ ಪತ್ರಿಕೆಗಳಲ್ಲಿ ಸಕ್ರಿಯವಾಗಿದ್ದರು. ವಂಶ, ನವ್ಯವಾಣಿ ವಾರಪತ್ರಿಕೆಗಳಲ್ಲಿ ಲೇಖನ ಕವನ ಬರಹಗಳನ್ನು ಪ್ರಕಟಿಸಿ ಕವಿ ಸಾಹಿತಿಯಾಗಿ ಗುರುತಿಸಲ್ಪಟ್ಟಿದ್ದಾರೆ.

ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ ಸುದೀರ್ಘ ಕಾಲ ಜವಾಬ್ದಾರಿ ನಿರ್ವಹಿಸಿದ್ದರು. ದ.ಕ. ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರಾಗಿ ಸಾಹಿತ್ಯ ಚಟುವಟಿಕೆಯಲ್ಲಿ ಹಲವು ಪ್ರತಿಭೆಗಳಿಗೆ ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾಧ್ಯಕ್ಷರಾಗಿ ಚುಟುಕು ಸಾಹಿತ್ಯ ರಚನೆ ತರಬೇತಿ ಶಿಬಿರಗಳನ್ನು ಶಾಲಾ ಕಾಲೇಜುಗಳಲ್ಲಿ ನಡೆಸಿಕೊಡುತ್ತಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕಿನ ಅಧ್ಯಕ್ಷರಾಗಿದ್ದು ಪ್ರಸ್ತುತ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿರುತ್ತಾರೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಸಾಹಿತ್ಯ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದು, ರಾಜ್ಯ ಅಂತರಾಷ್ಟ್ರೀಯ ಮಟ್ಟದ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಕವಿಯಾಗಿ ಗುರುತಿಸಿಕೊಂಡಿದ್ದಾರೆ.
ಜೆ.ಸಿ.ಐ ಸಂಸ್ಥೆಯ ಉದಕ ಪತ್ರಿಕೆಯ ಸಂಪಾದಕರಾಗಿ, ನೇತ್ರಾವತಿ ಜೋಡುಮಾರ್ಗ , ಸರಯು ಪತ್ರಿಕೆ ಹಾಗೂ ಹಲವು ಸ್ಮರಣ ಸಂಚಿಕೆಗಳಲ್ಲಿ ಸಂಪಾದಕರಾಗಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಭಾವಬಿಂದು ಕವನ ಸಂಕಲನ ಪ್ರಕಟಿಸಿದ್ದಾರೆ.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಜೆಸಿಐ ಜೋಡುಮಾರ್ಗ ನೇತ್ರಾವತಿ ಜ್ಯೂನಿಯರ್ ಚೇಂಬರ್‍ನ ಅಧ್ಯಕ್ಷರಾಗಿದ್ದರು. ಜೆಸಿಐ ರಾಜ್ಯ ತರಬೇತುದಾರರಾಗಿ , ರಾಷ್ಟೀಯ ತೀರ್ಪುಗಾರರಾಗಿದ್ದರು. ಪ್ರಸ್ತುತ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರವಾತಿ ಸಂಗಮದ ಅಧ್ಯಕ್ಷರಾಗಿದ್ದಾರೆ. ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ ಹಲವು ಸಾಧನಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಕನ್ನಡ ರತ್ನ, ಚೈತನ್ಯ ಶ್ರೀ, ಶಿಕ್ಷಕರ ರತ್ನ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಪತ್ರಿಕಾ ರಂಗದ ಭೀಷ್ಮ ಮೊದಲಾದ ಗೌರವ ಪ್ರಶಸ್ತಿಗಳು ಇವರಿಗೆ ದೊರಕಿದೆ. ಪತ್ರಕರ್ತರಾಗಿ ,ಸಾಹಿತಿಯಾಗಿ, ಕವಿಯಾಗಿ ,ನಾಟಕ ನಿರ್ದೇಶಕರಾಗಿ, ಯಕ್ಷಗಾನ ಕಲಾವಿದರಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸಿದ್ದು ಹಲವು ಪುರಸ್ಕಾರಗಳು ಇವರಿಗೆ ಲಭಿಸಿವೆ.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here