Thursday 23rd, March 2023
canara news

ಮಲಬಾರ್ ವಿಶ್ವರಂಗ ಪುರಸ್ಕಾರ-2023ಕ್ಕೆ ಹಿರಿಯ ರಂಗನಟ ಮೋಹನ್ ಮಾರ್ನಾಡ್ ಆಯ್ಕೆ

Published On : 05 Mar 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಮಾ.01: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ 2023ನೇ ಸಾಲಿನ ಮಲಬಾರ್ `ವಿಶ್ವರಂಗ' ಪುರಸ್ಕಾರಕ್ಕೆ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

ಮುಂಬಯಿ ಅಲ್ಲಿನ ಹಿರಿಯ ರಂಗನಟ ಮೋಹನ್ ಮಾರ್ನಾಡ್(ಹೊರ ರಾಜ್ಯ), ಮೂರ್ತಿ ದೇರಾಜೆ (ರಂಗ ನಿರ್ದೇಶಕರು), ಶೋಭಾ ವೆಂಕಟೇಶ್ , ಬೆಂಗಳೂರು (ಮಕ್ಕಳ ರಂಗಭೂಮಿ) , ಎಂ.ಎಸ್. ಭಟ್ ಉಡುಪಿ ( ರಂಗ ನಟ), ಪ್ರಕಾಶ್ ನೊರೋನ್ಹ ಪಾಂಬೂರು (ರಂಗ ಸಂಘಟಕರು) ಇವರು ಆಯ್ಕೆ ಆಗಿದ್ದಾರೆ. ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಸುತ್ತಿರುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ `ಮಲಬಾರ್ ವಿಶ್ವರಂಗ ಪುರಸ್ಕಾರ-2023' ಪ್ರದಾನ ಮಾಡಿ ಗೌರವಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 




More News

ಮಂಗಳೂರು ವಿವಿ 41ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್
ಮಂಗಳೂರು ವಿವಿ 41ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್
ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ
ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ
ವಿಶೇಷ ಹಿಂದಿ ವ್ಯಾಕರಣ ತರಗತಿ
ವಿಶೇಷ ಹಿಂದಿ ವ್ಯಾಕರಣ ತರಗತಿ

Comment Here