Tuesday 25th, June 2024
canara news

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ"ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ "

Published On : 03 Mar 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಫೆ.28: ಪುತ್ತೂರು ಇಲ್ಲಿನ ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ "ಪೂವರಿ" ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ ಹಾಗೂ 2023ರ "ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ" ಪ್ರದಾನ ಸಮಾರಂಭ ಇಂದಿಲ್ಲಿ ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರುಗಿದ್ದು ಸಮಾರಂಭದಲ್ಲಿ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರಿಗೆ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು ಭಾಷೆಯ ಏಕೈಕ ತುಳು ಮಾಸಿಕ "ಪೂವರಿ" ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಒಡಿಯೂರು ತುಳು ಸಾಹಿತ್ಯ ಸಮ್ಮೇಳನದ ಪ್ರಶಸ್ತಿ ಸಹಿತ ಅನೇಕ ಮಾಧ್ಯಮ ಪ್ರಶಸ್ತಿಗಳ ಸರಮಾಲೆಯನ್ನೇ ಹೆಗಲಿಗೆ ಹಾಕಿಕೊಂಡಿದೆ.

ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ.) ಗಡಿನಾಡ ಧ್ವನಿ ಮಾಸಿಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಸರಕಾರದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಮಲಾರ್ ಜಯರಾಮ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ, ಸಮ್ಮೇಳನದ ರೂವಾರಿ ಡಾ| ಎಸ್. ಅಬೂಬಕ್ಕರ್ ಆರ್ಲಪದವು, ಕಸಾಪ ಪುತ್ತೂರು ತಾಲೂಕು ಅಧ್ಯಕ್ಷ ಉಮೇಶ್ ನಾಯಕ್, ಡಾ| ಹರ್ಷ ರೈ ಮಾಡಾವು, ಕೆ. ಈಶ್ಯರ ಭಟ್ ಕಡಂದೇಲು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

 

 
More News

ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ
ಶಾಂತಿವನ ಟ್ರಸ್ಟ್ ಆಶ್ರಯದಿಂದ ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ
ಶಾಂತಿವನ ಟ್ರಸ್ಟ್ ಆಶ್ರಯದಿಂದ ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

Comment Here