Monday 24th, June 2024
canara news

ಮಂಗಳೂರು ವಿವಿ 41ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್

Published On : 19 Mar 2023   |  Reported By : Rons Bantwal


ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ-ರಾಷ್ಟೀಯ ಶಿಕ್ಷಣ ನೀತಿಯ ಆಶಯ

ಮುಂಬಯಿ (ಆರ್‍ಬಿಐ), ಮಾ.15: ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳನ್ನು ಆದಷ್ಟು ಶೀಘ್ರವೇ ಕನ್ನಡದಲ್ಲಿ ತರುವ ಐತಿಹಾಸಿಕ ನಿರ್ಧಾರ ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಕೈಗೊಳ್ಳಲಾಗಿದೆ. ಸ್ಥಾನೀಯ ಭಾಷೆಯಲ್ಲೇ ಕಲಿತು ದೇಶದ ಅಭಿವೃದ್ಧಿಗೆ ತೀವ್ರತೆ ತುಂಬುವುದು ಇದರ ಉದ್ದೇಶವಾಗಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ 41ನೇ ಘಟಿಕೋತ್ಸವ ಇಂದಿಲ್ಲಿ ಬುಧವಾರ ಪೂರ್ವಾಹ್ನ ಕೋಣಾಜೆ ಇಲ್ಲಿನ ಮಂಗಳೂರು ವಿವಿಯಮಂಗಳ ಸಭಾಂಗಣದಲ್ಲಿ ನಡೆಸಲಾಗಿದ್ದು ಈ ಬಾರಿ ಇಲ್ಲಿನ 7 ಮಂದಿ ವಿದೇಶಿಗರೂ ಸೇರಿದಂತೆ 115 ಮಂದಿಗೆ ಪಿ.ಹೆಚ್‍ಡಿ ಪದವಿ ಪ್ರದಾನಿಸಿ, 55 ಮಂದಿಗೆ ಚಿನ್ನದ ಪದಕ, 57 ನಗದು ಬಹುಮಾನ ವಿತರಿಸಿ, 199 ಮಂದಿ ರ್ಯಾಂಕ್ ವಿಜೇತರಲ್ಲಿ ಪ್ರಥಮ ರ್ಯಾಂಕ್ ಪಡೆದ 71 ಮಂದಿಗೆ ಪ್ರಮಾಣ ಪತ್ರ ಪ್ರದಾನಿಸಿ ರಾಜ್ಯಪಾಲ ಗೆಹ್ಲೋಟ್ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆಗೈದ ಮೂವರು ಸಾಧಕರಿಗೆ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದ್ದು, ಶಿಕ್ಷಣ ಮತ್ತು ಸಮಾಜಸೇವೆಯಲ್ಲಿ ಮಾಡಿದ ಸಾಧನೆಗಾಗಿ ಮಂಗಳೂರು ಇಲ್ಲಿನ ಕಣಚೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್‍ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಹಾಜಿ ಯು.ಕೆ.ಮೋನು, ಸಮಾಜಸೇವೆಗಾಗಿ ಪೆÇ್ರ| ಎಂ.ಬಿ.ಪುರಾಣಿಕ್ ಮತ್ತು ಕೃಷಿ, ಶಿಕ್ಷಣ ಮತ್ತು ಸಮಾಜಸೇವೆ ಗಾಗಿ ಉದ್ಯಮಿ ಜಿ. ರಾಮಕೃಷ್ಣ ಆಚಾರ್ ಹಾಗೂ ಶಿಕ್ಷಣ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಗೆಹ್ಲೋಟ್ ಪ್ರದಾನಿಸಿ ಅಭಿನಂದಿಸಿದರು.

ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮೌಲೀಕರಣ ಮತ್ತು ವಿಶ್ವವಿದ್ಯಾನಿಲಯ ಶಿಕ್ಷಣದ ಪರಿಕಲ್ಪನೆ ನಾವು ಅರ್ಥಮಾಡಿಕೊಳ್ಳಬೇಕು ಎಂಬುದು ರಾಷ್ಟೀಯ ಶಿಕ್ಷಣ ನೀತಿಯ ಆಶಯ. ಅದು ನಮ್ಮ ಬಹುಕಾರ್ಯ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಮಾನವೀಯ ಗುಣ ಮತ್ತು ಮಾನವಿಕ ಶಾಸ್ತ್ರದ ಅಧ್ಯಯನ ಇದಕ್ಕೆ ಅಗತ್ಯ. ನಮ್ಮಪ್ರಾಚೀನ ಜ್ಞಾನದ ಅರಿವು, ನಮ್ಮ ಸಂಸ್ಕೃತಿಯ ಶ್ರೀಮಂತಿಯ ಉಳಿವು, ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯ ಒಳ್ಳೆಯ ಅಂಶಗಳ ತಿಳಿವು ಬೇಕಾಗಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ| ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಸ್ವಾಗತಿಸಿ ಪ್ರಸ್ತಾವನೆಗೈ ದು ವಿಶ್ವವಿದ್ಯಾನಿಲಯದ ಸಾಧನೆ-ಉದ್ದೇಶಗಳನ್ನು ವಿವರಿಸಿ ಶೈಕ್ಷಣಿಕ ವರ್ಷ 2021-22ರಲ್ಲಿ ಶೇಕಡಾ 82.72 ಪಲಿತಾಂಶ ದಾಖಲಾಗಿದೆ ಎಂದರು.

ಕುಲಸಚಿವ ಪೆÇ್ರ| ಕಿಶೋರ್ ಕುಮಾರ್ ಸಿ.ಕೆ, ಕುಲಸಚಿವ (ಪರೀಕ್ಷಾಂಗ) ಪೆÇ್ರ| ರಾಜು ಕೃಷ್ಣ ಚಲನ್ನವರ್, ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ನಿಖಾಯಗಳ ಡೀನ್‍ಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದರು. ಪ್ರಾಧ್ಯಾಪಕರುಗಳಾದ ಡಾ| ಧನಂಜಯ ಕುಂಬ್ಳೆ ಮತ್ತು ಪ್ರೀತಿ ಕೀರ್ತಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

 

 

 
More News

ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ
ಶಾಂತಿವನ ಟ್ರಸ್ಟ್ ಆಶ್ರಯದಿಂದ ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ
ಶಾಂತಿವನ ಟ್ರಸ್ಟ್ ಆಶ್ರಯದಿಂದ ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

Comment Here