Saturday 27th, July 2024
canara news

ಪತ್ರಕರ್ತ ರವೀಂದ್ರ ಶೆಟ್ಟಿ ಅವರ ನಮ್ಮ ಉಡುಪಿ ಕೃತಿ ಬಿಡುಗಡೆ

Published On : 22 Mar 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಮಾ.21: ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಬರೆದಿರುವ ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್‍ನಿಂದ ಪ್ರಕಟಿಸಲಾದ ಉಡುಪಿ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ನಮ್ಮ ಉಡುಪಿ ಕೃತಿಯನ್ನು ಮಾರ್ಚ್ 19ರಂದು ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆÇಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಸ್ಥಾಪಕ ಉಪಾಧ್ಯಕ್ಷ ಎಎಸ್‍ಎನ್ ಹೆಬ್ಬಾರ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಮಹೋತ್ಸವ ಸಮಿತಿ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

ನಮ್ಮ ಉಡುಪಿಯಲ್ಲಿ ಏನೇನಿದೆ : ನಮ್ಮ ಉಡುಪಿ ಕೃತಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಭೌಗೋಳಿಕ ವಿವರಗಳು, ಭಾಷೆ, ಧಾರ್ಮಿಕ ಆಚರಣೆ, ಬ್ಯಾಂಕಿಂಗ್, ಉಡುಪಿ ಲೋಕಸಭೆ, ವಿಧಾನ ಸಭೆ ಸದಸ್ಯರ ವಿವರಗಳು, ಸ್ಥಳೀಯಾಡಳಿತ ಸಂಸ್ಥೆಗಳ ಮಾಹಿತಿ, ಪ್ರವಾಸೋದ್ಯಮ, ಪ್ರಮುಖ ತಾಣಗಳ ಚಿತ್ರಣ, ಪ್ರಾಥಮಿಕ, ಪ್ರೌಢ, ಕಾಲೇಜು, ವೃತ್ತಿಪರ ಕಾಲೇಜುಗಳು, ಪೆÇಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳು, ತುಳು ಸಿನಿಮಾಗಳ ಮಾಹಿತಿ, ರಾಜಕೀಯ ವಿವರಗಳು, ಆಡಳಿತ ಮಾಹಿತಿ, ಪ್ರವಾಸೋದ್ಯಮ, ಶಿಕ್ಷಣ ಸಂಸ್ಥೆಗಳು, ವೃತ್ತಿಪರ ಕಾಲೇಜುಗಳು, ಗ್ರಂಥಾಲಯಗಳು, ಪ್ರಮುಖ ದೇವಸ್ಥಾನ, ಚರ್ಚ್, ಮಸೀದಿಗಳು, ಹೊಟೇಲು, ಲಾಡ್ಜ್, ರೆಸಾರ್ಟ್, ಕಲ್ಯಾಣ ಮಂಟಪಗಳು, ಪ್ರಮುಖ ಕೆರೆ, ಮದಗಗಳು, ಸಾರಿಗೆ ಸೌಲಭ್ಯ, ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ಬ್ಲಾಡ್ ಬ್ಯಾಂಕ್‍ಗಳು ಹೀಗೆ ಸಮಗ್ರ ಮಾಹಿತಿಗಳನ್ನು ಈ ಕೃತಿ ಒಳಗೊಂಡಿದೆ.

ಕೃತಿಗೆ ಮಂಗಳೂರು ಕುಲಪತಿ ಪೆÇ್ರ| ಪಿ.ಎಸ್. ಯಡಪಡಿತ್ತಾಯ ಮುನ್ನುಡಿ ಬರೆದಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಬೆನ್ನುಡಿ ಬರೆದಿದ್ದಾರೆ. ಕೃತಿಗೆ ಡಿಜಿಟಲ್ ಸ್ಪರ್ಶ ಕೂಡ ನೀಡಲಾಗಿದ್ದು, ಉಡುಪಿ ಜಿಲ್ಲೆಯ ಸಮಗ್ರ ಚಿತ್ರಣದ ದ್ರಶ್ಯವನ್ನು ಕೂಡ ಪುಸ್ತಕದಲ್ಲಿರುವ ಕ್ಯೂ ರ್ಆ ಕೋಡ್ ಬಳಸಿಕೊಂಡು ವೀಕ್ಷಿಸಬಹುದಾಗಿದೆ.




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here