Thursday 8th, May 2025
canara news

*ಮಣಿಪುರ ಘಟನೆಯನ್ನು ಖಂಡಿಸಿ ಸಮಾನ ಮನಸ್ಕರಿಂದ ಬೃಹತ್ ಪ್ರತಿಭಟನೆ*

Published On : 23 Jul 2023   |  Reported By : media release


ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ,ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಇಂದು ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಸುರಿಯುತ್ತಿದ್ದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ಅಪಾರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು‌.ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು_ .

*ಜಾತ್ಯಾತೀತ ಪಕ್ಷಗಳು ಮತ್ತು ಸಂಘಟನೆಗಳ ಜಂಟಿ ವೇದಿಕೆಯ ಅಧ್ಯಕ್ಷರಾದ ಮಾಜಿ ಸಚಿವ ಬಿ ರಮಾನಾಥ ರೈ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು.ಬಳಿಕ ಮದರ್ ಥೆರೆಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರಾಯ್ ಕ್ಯಾಸ್ಟಲಿನೋ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ,ರೈತ ಸಂಘದ ಸನ್ನಿ ಡಿಸೋಜ, ಕೆಥೋಲಿಕ್ ವುಮನ್ಸ್ ಅಸೋಸಿಯೇಷನ್‌ ಜಿಲ್ಲಾಧ್ಯಕ್ಷರಾದ ಗ್ರೆಟ್ಟಾ ಪಿಂಟೊ,ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಸಭೆಯನ್ನುದ್ದೇಶಿಸಿ ಮಾತನಾಡಿದರು.*

_ಪ್ರತಿಭಟನೆಯಲ್ಲಿ ಕಾಂಗ್ರೆಸ್,CPI, CPIM ಪಕ್ಷಗಳು ಸೇರಿದಂತೆ ವಿದ್ಯಾರ್ಥಿ, ಯುವಜನ,ಮಹಿಳಾ,ದಲಿತ, ಆದಿವಾಸಿ,ವಕೀಲ, ಸಾಂಸ್ಕೃತಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು_




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here