Sunday 3rd, December 2023
canara news

ಆ.06: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಭ್ರಮದ ಪತ್ರಕರ್ತರ ದಿನಾಚರಣೆ

Published On : 05 Aug 2023   |  Reported By : Rons Bantwal


ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀಪ್ರಶಸ್ತಿ ಪ್ರದಾನ

ಮುಂಬಯಿ, ಆ.05: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಇಂದು (ಆ.06) ಭಾನುವಾರ ಪೂರ್ವಾಹ್ನ ಲೋಟಸ್ ಸಭಾಗೃಹ, ಸಾಲೀಟರಿ ಕಾಪೆರ್Çೀರೆಟ್ ಪಾರ್ಕ್, ಅಂಧೇರಿ ಪೂರ್ವ ಮುಂಬಯಿ ಇಲ್ಲಿ ಪತ್ರಕರ್ತರ ದಿನಾಚರಣೆ-2023 ಆಚರಿಸಲಿದೆ.

ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಜರುಗುವ ಸಮಾರಂಭವನ್ನು ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ಉದ್ಘಾಟಿಸುವರು. ಕಾರಕ್ರಮದಲ್ಲಿ ಪತ್ರಕರ್ತರ ಸಂಘದ 2022 ಮತ್ತು 2023ನೇ ವಾರ್ಷಿಕ ಶ್ರೀ ಕೆ.ಟಿ ವೇಣುಗೋಪಾಲ್ ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದು.

       

 K V Prabhakar                               Shivanand Tagadooru                       Dr. Suneetha M. Shetty

   

L. V. Amin                             Rons Bantwal

ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್.ವಿ ಅವಿೂನ್ ಮತ್ತು ಪ್ರಶಸ್ತಿ ಸಮಿತಿ ಕಾರ್ಯಾಧ್ಯಕ್ಷೆ ಡಾ| ಸುನೀತಾ ಎಂ.ಶೆಟ್ಟಿ ಉಪಸ್ಥಿತರಿದ್ದು ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ಬೃಹನ್ಮುಂಬಯಿ ಅಲ್ಲಿನ ಹಿರಿಯ ಪತ್ರಕರ್ತ, ದಿವೋ ಕೊಂಕಣಿ ಸಾಪ್ತಾಹಿಕದ ಸಂಪಾದಕ ಲಾರೇನ್ಸ್ ಕುವೆಲ್ಹೋ ಅವರಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಾವಳಗಿ ಮೂಲತಃ ಸನತ್ ಕುಮಾರ ಬೆಳಗಲಿ ಇವರಿಗೆ ಪ್ರದಾನಿಸಲಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿü ಗಣ್ಯರ ಉಪಸ್ಥಿತಿಯಲ್ಲಿ ಈ ಪುರಸ್ಕಾರ ಪ್ರದಾನಿಸಲಾಗುವುದು ಮತ್ತು ಕÀನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಪ್ರಥಮ ಕೃತಿ, ಸಂಘದ ಸಲಹಾ ಸಮಿತಿಯ ಹಿರಿಯ ಸದಸ್ಯೆ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಗೊಳಿಸಲಾಗುವುದು ಎಂದು ಕಪಸಮ ಗೌ| ಪ್ರ| ಕಾರ್ಯದರ್ಶಿ ಸಾ.ದಯಾ (ದಯಾನಂದ್) ಮತ್ತು ಜೊತೆ ಕಾರ್ಯದರ್ಶಿ ಸವಿತಾ ಎಸ್.ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ ಎಂದು ಕಪಸಮ ಉಪಾಧ್ಯಕ್ಷ ಡಾ| ಶಿವ ಮೂಡಿಗೆರೆ, ಗೌ| ಪ್ರ| ಕಾರ್ಯದರ್ಶಿ ಸಾ.ದಯಾ (ದಯಾನಂದ್) ಮತ್ತು ಜೊತೆ ಕಾರ್ಯದರ್ಶಿ ಸವಿತಾ ಎಸ್.ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
More News

ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ (ಉತ್ಹಾನ ದ್ವಾದಶಿ ) ಆಚರಣೆ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ

Comment Here