Thursday 8th, May 2025
canara news

ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿ, ದೆಹಲಿಯಿಂದ ಕಥಾಸಂಧಿ ಕಾರ್ಯಕ್ರಮ

Published On : 02 Aug 2023   |  Reported By : Rons Bantwal


ಮುಂಬಯಿ, ಆ.02: ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ" ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು.

ಮಂಗಳೂರುನ ಕೊಡಿಯಾಳ್‌ಬೈಲ್ ಅಲ್ಲಿನ ಬಿಷಪ್ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ ಕಳೆದ ಭಾನುವಾರ (ಜು.30) ಸಾಹಿತ್ಯ ಅಕಾಡೆಮಿ ದೆಹಲಿ ಆಯೋಜಿಸಿದ ಕಥಾಸಂಧಿ ಕಾರ್ಯಕ್ರಮದಲ್ಲಿ ತಮ್ಮ ಆಯ್ದ ಕಥೆ ’ಮಾಂಯ್ ಕಿತ್ಯಾಕ್ ರಡ್ತಾ?’ (ಅಮ್ಮ ಯಾಕೆ ಅಳುತ್ತಾರೆ?) ಪ್ರಸ್ತುತ ಪಡಿಸಿ, ಕಥನ ಕಲೆಯ ಬಗ್ಗೆ ಕಾಸ್ಸಿಯಾ ಮಾತನಾಡಿ ಕಥಾ ಪ್ರಸ್ತುತಿಯ ಬಳಿಕ ಕಥೆ, ಕಥಾಹಂದರ, ಆರಂಭ, ಅಂತ್ಯ ಮತ್ತು ತಿರುವುಗಳ ಬಗ್ಗೆ ಡಾಲ್ಫಿ ಕಾಸ್ಸಿಯಾ ಬೆಳಕು ಚೆಲ್ಲಿದರು.

ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸದಸ್ಯ, ಪತ್ರಕರ್ತ ಎಚ್ಚೆಮ್ ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ಬಗ್ಗೆ ವಿಸ್ತ್ರತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದರು.

ಸಾಹಿತ್ಯ ಅಕಾಡೆಮಿ ಜನರಲ್ ಕಾವ್ನ್‌ಸಿಲ್ ಸದಸ್ಯ, ಕೊಂಕಣಿ ಭಾಷಾ ಮುಖ್ಯಸ್ಥರೂ ಆಗಿರುವ ಕವಿ ಮೆಲ್ವಿನ್ ರಾಡ್ರಿಗಸ್ ಕಥಾಕಾರರನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು.

ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಲಹಾ ಸಮಿತಿ ಸದಸ್ಯ ಸ್ಟ್ಯಾನಿ ಬೇಳಾ ಹಾಜರಿದ್ದು ರಾಕ್ಣೊ ಸಂಪಾದಕ ವಂ| ರೂಪೇಶ್ ಅಶೋಕ್ ಮಾಡ್ತಾ ಸಂವಾದ ನಿರೂಪಿಸಿ ವಂದಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here