Thursday 28th, September 2023
canara news

ಪಡುಕೊಣಾಜೆ ಸರಕಾರಿ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್ಯಕ್ರಮ

Published On : 01 Sep 2023   |  Reported By : Rayee Rajkumar


ಮೂಡುಬಿದಿದೆ ಸಮೀಪದ ಪಡುಕೊಣಾಜೆ ಸರಕಾರಿ ಪ್ರೌಢಶಾಲೆಯಲ್ಲಿ ಸಪ್ಟೆಂಬರ್ 31ರಂದು ಗ್ರಾಹಕ ಮಾಹಿತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ರಾಜ್ಯದ ಸಂಪನ್ಮೂಲ ವ್ಯಕ್ತಿ ಮೂಡುಬಿದಿರೆಯ ರಾಯೀ ರಾಜಕುಮಾರ ಅವರು ಗ್ರಾಹಕ ಮಾಹಿತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ತಮ್ಮ ಈ ಕಾರ್ಯಕ್ರಮದಲ್ಲಿ ಅವರು 1986ರ ಗ್ರಾಹಕ ಹಿತ ರಕ್ಷಣಾ ಕಾಯಿದೆಯ ಎಲ್ಲ ಮಜಲುಗಳನ್ನು ಪರಿಚಯಿಸಿ ಗ್ರಾಹಕ ಫೋರಂನಲ್ಲಿ ಪರಿಹಾರವನ್ನು ಪಡೆಯುವ ಮಾರ್ಗವನ್ನು ತಿಳಿಸಿಕೊಟ್ಟರು. ಯಾವುದೇ ವಸ್ತುವನ್ನು ಕೊಳ್ಳುವಾಗ ಯಾವ್ಯಾವ ಅಂಶಗಳನ್ನು ಗಮನಿಸಬೇಕೆಂದು ತಿಳಿಸಿದರು. ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳು ದೊರಕದಿದ್ದಾಗ 2005 ರ ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಪಡೆಯುವ ವಿಧಾನವನ್ನು ತಿಳಿಸಿದರು. ಸಾಮಾಜಿಕವಾಗಿ ಮಾನವ ಹಕ್ಕು ಆಯೋಗದಿಂದ ಜನರಿಗೆ ದೊರಕುವ ಲಾಭವನ್ನು ಕೂಡ ತಿಳಿಸಿಕೊಟ್ಟರು.

ವೇದಿಕೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅಧ್ಯಾಪಕಿ ಶ್ರೀಮತಿ ಅನ್ನಪೂರ್ಣೇಶ್ವರಿ ಸ್ವಾಗತಿಸಿದರು. ಅಧ್ಯಾಪಕ ಹಾಗೂ ಗ್ರಾಹಕ ಕ್ಲಬ್ ನ ಸಂಚಾಲಕ ಗಂಗಾಧರ ಪಾಟೀಲ್ ವಂದಿಸಿದರು. ಶಿಕ್ಷಕಿ ಶ್ರೀಮತಿ ನಳಿನಿ ಬಿ, ಶ್ರೀಮತಿ ಸುಚಿತ್ರಾ ಪೈ, ಶ್ರೀಮತಿ ಗೀತಾ ವೇದಿಕೆಯಲ್ಲಿ ಹಾಜರಿದ್ದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಒಕ್ಕೂಟದ ಮಾಹಿತಿ ಪುಸ್ತಕವನ್ನು ಶಾಲೆಯ ವಾಚನಾಲಯಕ್ಕೆ ಕೊಡುಗೆಯಾಗಿ ನೀಡಲಾಯಿತು.

 




More News

ಸೆ.30: ಮುಂಬಯಿ ವಿವಿ ಕನ್ನಡ ವಿಭಾಗದಿಂದ ಜಯ ಸಿ.ಸುವರ್ಣ ಸಂಸ್ಮರಣೆ
ಸೆ.30: ಮುಂಬಯಿ ವಿವಿ ಕನ್ನಡ ವಿಭಾಗದಿಂದ ಜಯ ಸಿ.ಸುವರ್ಣ ಸಂಸ್ಮರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ,ಶ್ರೀ ಗಣೇಶ ಚತುಥಿರ್s ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ,ಶ್ರೀ ಗಣೇಶ ಚತುಥಿರ್s ಆಚರಣೆ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ ಕಾರ್ಯಾಲಯ ಉದ್ಘಾಟನೆ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ ಕಾರ್ಯಾಲಯ ಉದ್ಘಾಟನೆ

Comment Here