Thursday 29th, February 2024
canara news

ಸೌದಿ ಅರೇಬಿಯಾ ಜನವರಿಯಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

Published On : 26 Dec 2023   |  Reported By : Rons Bantwal


ಮುಂಬಯಿ ಡಿ.26: ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ, ಸೌದಿ ಅರೇಬಿಯಾ ಮತ್ತು ಹೃದಯವಾಹಿನಿ - ಕರ್ನಾಟಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19, 2024ರಂದು ದಮಾಮ್‍ನ ಸಫ್ವಾ ಸಭಾಂಣದಲ್ಲಿ 2 ದಿನಗಳ ಕಾಲ ಅದ್ಧೂರಿಯಾಗಿ ಹಮ್ಮಿಕೊಂಡಿರುತ್ತೇವೆ.

ಸಮ್ಮೇಳನದಲ್ಲಿ ಸಾಹಿತ್ಯಕ್ಕೆ ಸಂಬಂದಪಟ್ಟಂತೆ ಕವಿಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮಗೋಷ್ಠಿ ಹಾಗೂ ಅನಿವಾಸಿ ಕನ್ನಡಿಗರ ಗೋಷ್ಠಿ ಜರಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪ, ಯಕ್ಷಗಾನ, ಡೊಳ್ಳು ಕುಣಿತ, ದಫ್ ಮುಂತಾದ ಕಲೆಗಳು ಪ್ರದರ್ಶನಗೊಳ್ಳುವವು. ಕರ್ನಾಟಕದ ಕಲೆ, ಮತ್ತು ಸಂಸ್ಕೃತಿಗಳು ವಿದೇಶಿ ನೆಲವಾದ ದಮ್ಮಾಮ್ ನಲ್ಲಿ ಪ್ರತಿಬಿಂಬಿಸಲಿವೆ.

ಸಮ್ಮೇಳನ ನಡೆಯಲಿರುವ ಸಭಾಂಗಣದ ಹೊರವಲಯದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು. ಸೌದಿ ಅರೇಬಿಯಾದಲ್ಲಿ 40,000ಕ್ಕೂ ಹೆಚ್ಚು ಕನ್ನಡಿಗರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುವಂತೆ ಪ್ರಚಾರ ನೀಡಲಾಗುವುದು. ಗಲ್ಫ್ ರಾಷ್ಟ್ರಗಳಾದ, ಬಹರೇನ್, ಅಬು ಧಾಬಿ, ಕುವೈತ್, ಕತಾರ್, ಶಾರ್ಜಾ, ಮತ್ತುದುಬೈನಲ್ಲಿ ನೆಲೆಸಿರುವ ಕನ್ನಡಿಗರು ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಲಾಗುವುದು.

ಜನವರಿ 18 ರಂದು ಮಧ್ಯಾಹ್ನ ಉದ್ಘಾಟನೆ ನೆರವೇರಿಸಲು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರನ್ನು ಆಮಂತ್ರಿಸಲಾಗುವುದು. ಎರಡು ದಿನಗಳ ಸಮ್ಮೇಳನದ ಗಣ್ಯರನ್ನಾಗಿ ವಿಧಾನಸಭಾ ಸಭಾಪತಿಗಳಾದ ಶ್ರೀ ಯು ಟಿ ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಕೃಷಿ ಖಾತೆ ಸಚಿವರಾದ ಚೆಲುವರಾಯಸ್ವಾಮಿ, ಆರೋಗ್ಯ ಖಾತೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಖಾತೆ ಸಚಿವರಾದ ಮಧು ಬಂಗಾರಪ್ಪ, ಪೌರಾಡಳಿತ ಮತ್ತು ಹಜ್ ಖಾತೆ ಸಚಿವರಾದ ರಹಿಂ ಖಾನ್ ಅನಿವಾಸಿ ಭಾರತೀಯ ವೇದಿಕೆ - ಕರ್ನಾಟಕ ಇದರ ಉಪಾಧ್ಯಕ್ಷರಾದ ಡಾ| ಆರತಿ ಕೃಷ್ಣ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರಾದ ಪೆÇ್ರ. ಎಸ್. ಜಿ. ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲಾಗಿದೆ.

ಜನವರಿ 19ರ ಸಂಜೆ ಸಮಾರೋಪ ಮತ್ತು ಪುರಸ್ಕಾರ ಸಮಾರಂಭ ಜರಗಲಿರುವವು. ಕರ್ನಾಟಕ ಮತ್ತು ಭಾರತದ ಇತರ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚು ಸದಸ್ಯರ ಸಾಂಸ್ಕೃತಿಕ ನಿಯೋಗ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದೆ. ವಿವಿಧ ದೇಶಗಳ ಕನ್ನಡ ಸಂಘಗಳ ಪದಾಧಿಕಾರಿಗಳುಸಮ್ಮೇಳನದಲ್ಲಿ ಭಾಗವಹಿಸಲಿರುವರು.

ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯನ್ನು ಜನವರಿ ಮೊದಲ ವಾರ ಮಾಡಲಾಗುವುದು. ಹಿರಿಯ ಅರ್ಹ ಸಾಹಿತಿಗಳ ಹೆಸರು ಸೂಚಿಸಲಿಚ್ಚಿಸುವವರು ಜನವರಿ 2, 2024 ರೊಳಗೆ hrudayavahini@rediffmail.com ಈ ಮೈಲ್ ಗೆ ಮಾಹಿತಿ ಕಳುಹಿಸಬಹುದು. ಸುಪ್ರಸಿದ್ಧ ಕಲಾವಿದರಾದ. ಕುದ್ರೋಳಿ ಗಣೇಶ್ ಅವರ ತಂಡದಿಂದ ಮ್ಯಾಜಿಕ್ ಶೋ, ಮಿಮಿಕ್ರಿ ಗೋಪಿ ಅವರಿಂದ ಸ್ವರಾನುಕರಣೆ, ಮಹದೇವ ಸತ್ತಿಗೇರಿ ಅವರಿಂದ ಹಾಸ್ಯ ಭಾಷಣ, ಗೋ ನಾ ಸ್ವಾಮಿ, ಪುಷ್ಪ ಆರಾಧ್ಯ, ಅನಿಲ್ ಬಾಸಗಿ ಮತ್ತು ಶಿವು ಮುಂತಾದ ಗಾಯಕರಿಂದ ಸ್ವರಮಂಜರಿ, ರಂಗ ಸಂಸ್ಕೃತಿ ಬೆಂಗಳೂರು ತಂಡದಿಂದ ಕಿರುನಗೆ ನಾಟಕ, ಪಟ್ಲ ಪೌಂಡೇಶನ್ ಬಹರೇನ್ ಮತ್ತು ಸೌದಿ ಅರೇಬಿಯಾ ಘಟಕದ ಕಲಾವಿದರಿಂದ ಯಕ್ಷಗಾನ, ಮಂಗಳೂರಿನ ಬ್ಯಾರಿ ಕಲಾವಿದರಿಂದ ದಫ್ ಪ್ರದರ್ಶನ, ಪುಷ್ಕರ ಪರ್ಫಾರ್ಮಿಂಗ್ ಆರ್ಟ್ಸ್ ಬೆಂಗಳೂರು ಇವರಿಂದ. ಭರತನಾಟ್ಯ,

 
More News

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ

Comment Here