Tuesday 16th, July 2024
canara news

ಅನಿತಾ ಪಿ.ತಾಕೊಡೆ ಅವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತ್ತ್‍ನ ದತ್ತಿ ಪ್ರಶಸ್ತಿ

Published On : 06 Mar 2024   |  Reported By : Rons Bantwal


ಮುಂಬಯಿ (ಆರ್‍ಬಿಐ), ಮಾ.06: ಕನ್ನಡ ಸಾಹಿತ್ಯ ಪರಿಷÀತ್ತ್‍ನ 2022ನೆಯ ಸಾಲಿನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಕಳೆದ ರವಿವಾರ (ಮಾ.03) ರಂದು ಬೆಂಗಳೂರುನ ಚಾಮರಾಜ ಪೇಟೆ ಇಲ್ಲಿನ ಶ್ರೀ ಕೃಷ್ಣರಾಜ ಪರಿಷÀತ್ತ್‍ನ ಮಂದಿರದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು.

ಕನ್ನಡ ಸಾಹಿತ್ಯ ಪರಿಷÀತ್ತ್‍ನ ಅಧ್ಯಕ್ಷ ನಾಡೋಜ ಡಾ| ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ವಿಶ್ರಾಂತ ಕುಲಪತಿ ಡಾ| ಎಸ್.ಎಸ್ ರಾಮೇಗೌಡ ಉದ್ಘಾಟಿಸಿದರು. ಮುಖ್ಯ ಅತಿಥಿs ಅಭ್ಯಾಗತರುಗಳಾಗಿ ವೈದ್ಯ ಹಾಗೂ ಹಿರಿಯ ಲೇಖಕ ಡಾ| ಯೋಗಣ್ಣ ಎಸ್.ಪಿ., ಮತ್ತು ಚಲನಚಿತ್ರ ಸಾಹಿತಿ ಕವಿರತ್ನ ಡಾ| ನಾಗೇಂದ್ರ ಪ್ರಸಾದ್ ಉಪಸ್ಥಿತರಿದ್ದು ಮುಂಬಯಿ ಅಲ್ಲಿನ ಹೆಸರಾಂತ ಲೇಖಕಿ, ಕವಯತ್ರಿ ಅನಿತಾ ಪಿ.ತಾಕೊಡೆ ಅವರ `ನಿವಾಳಿಸಿ ಬಿಟ್ಟ ಕೋಳಿ' ಕಥಾ ಸಂಕಲನಕ್ಕೆ ಕೆ.ವಾಸುದೇವಾಚಾರ್ಯ ದತ್ತಿ ಪ್ರಶಸ್ತಿ ಪ್ರದಾನಿಸಿ ಶುಭಾರೈಸಿದರು.

ಕಸಾಪವು 2022ರ ಜನವರಿಯಿಂದ ಡಿಸೆಂಬರ್ ಅಂತ್ಯದ ವರೆಗೂ ಪ್ರಕಟವಾದ ಕೃತಿಗಳ ಸಹಿತ ಒಟ್ಟು 51ದತ್ತಿ ಪ್ರಶಸ್ತಿಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಈ ಸ್ಪರ್ಧೆಗೆ ಆಹ್ವಾನಿಸಿತ್ತು. ಇದಕ್ಕೆ ರಾಜ್ಯ ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು ಅವುಗಳಲ್ಲಿ 25 ಜನ ಪರಿಣಿತರ ಸಮಿತಿ ವಿಜೇತರನ್ನು ಆಯ್ಕೆ ಮಾಡಿತ್ತು.

ಅನಿತಾ ಪೂಜಾರಿ ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ. ಇವರು ಕೆಎಸ್‍ಒಯು ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ ಪದವೀಧರೆ. ಮುಂಬಯಿ ವಿಶ್ವವಿದ್ಯಾಲಯದಲ್ಲಿ ಪ್ರಥಮ ರ್ಯಾಂಕ್‍ನೊಂದಿಗೆ ಎಂ.ಎ ಪದವಿ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಸ್ವರ್ಣಪದಕ ಗಳಿಸಿದ ಸಾಧಕಿ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ| ಜಿ.ಎನ್ ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ.

ಇವರ ಕೃತಿಗಳು, ಕತೆ, ಕವನ, ಲೇಖನಗಳಿಗೆ ಈಗಾಗಲೇ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. 2019ರಲ್ಲಿ ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಅನಿತಾ ಭಾಗವಹಿಸಿ ಗೌರವ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

 
More News

ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
 ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ

Comment Here