Thursday 8th, May 2025
canara news

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Published On : 23 Mar 2024   |  Reported By : Rons Bantwal


ವಾರ್ಷಿಕ ಉಚಿತ ಸಾಮೂಹಿಕ ವಿವಾಹ-ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ-ಸ್ವಸ್ತಿಕ್ ಪುರಸ್ಕಾರ ಪ್ರದಾನ

ಮುಂಬಯಿ (ಆರ್‍ಬಿಐ), ಮಾ.21: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವಾರ್ಷಿಕ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮಾ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್‍ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‍ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿ, ಮುಂಬಯಿ ಉದ್ಯಮಿ ಕಕ್ಯಪದವು ನಾರಾಯಣ ಶೆಟ್ಟಿ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾಮೂಹಿಕ ವಿವಾಹಕ್ಕೆ ಮುನ್ನ ಮಾ.23ರ ಶನಿವಾರ ಸ್ಥಾನೀಯ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಾ.24ರ ಆದಿತ್ಯವಾರ ಬೆಳಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದ ವರೆಗೆ ವೈಭವಪೂರ್ವಕವಾಗಿ ವಧು-ವರರ ದಿಬ್ಬಣ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 11.21ರ ಶುಭ ಮುಹೂರ್ತದಲ್ಲಿ 6 ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ.

ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು. ನವದೆಹಲಿ ಅನಾರೋಕ್ ಸಂಸ್ಥೆಯ ಉಪ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೆ.ಪಿ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ಅವರು ರಾಜ್ಯ ಪ್ರಶಸ್ತಿ ಪ್ರದಾನ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here