Saturday 25th, May 2024
canara news

ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ

Published On : 27 Apr 2024   |  Reported By : Rons Bantwal


ಮುಂಬಯಿ ಆರ್‍ಬಿಐ), ಏ.27: ಕಾಸರಗೋಡು ಉಪ್ಪಳ ಅಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮಕ್ಕೆ ಇದೇ ಭಾನುವಾರ (ಏ.28) ಸಾಯಂಕಾಲ 4.00 ಗಂಟೆಗೆ ಸರಿಯಾಗಿ ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ತತ್ಕರಕಮಲ ಸಂಜಾತರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಚಿತ್ತೈಸಿ ಭಕ್ತರನ್ನು ಆಶೀರ್ವದಿಸಿ ಹರಸಲಿದ್ದಾರೆ.

Shrangeri Shree 

Kondevooru Shree

ಕೊಂಡೆವೂರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಈ ಪುಣ್ಯ ಕಾರ್ಯಕ್ರಮದಲ್ಲಿ ಶ್ರೀ ಮಠದ ವತಿಯಿಂದ ಹಾಗೂ ವಿವಿಧ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವತಿಯಿಂದ ಶ್ರೀ ಶ್ರೀ ಜಗದ್ಗುರುಗಳವರ ಚರಣಾರವಿಂದಗಳಿಗೆ ಅಭಿವಂದನೆಗಳನ್ನು ಸಮರ್ಪಿಸಲಿದ್ದಾರೆ. ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶ್ರೀ ಜಗದ್ಗುರುಗಳವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ, ಜಗದ್ಗುರುಗಳವರ ಅಭಿವಂದನಾ ಸಮಿತಿ, ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here