Wednesday 24th, April 2024
canara news

ಕಾರ್ಕಳದಲ್ಲಿ ಎಚ್೧ ಎನ್೧ ಪತ್ತೆ

Published On : 01 Mar 2015   |  Reported By : canaranews network - Udupi


ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಮತ್ತೊಂದು ಎಚ್೧ ಎನ್೧ ಪ್ರಕರಣ ಪತ್ತೆಯಾಗಿದೆ. ಕಾರ್ಕಳ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸುರೇಖಾ (೨೫) ಎಂಬವರಿಗೆ ಈ ಸೋಂಕು ಕಾಣಿಸಿಕೊಂಡಿದೆ. ಸುರೇಖಾ ಅವರಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಕಳದಲ್ಲಿ ಇತ್ತೀಚೆಗಷ್ಟೆ ಯುವಕನೊಬ್ಬನಿಗೆ ಎಚ್೧ ಎನ್೧ ಪತ್ತೆಯಾಗಿದ್ದು ಇದು ಎರಡನೆ ಪ್ರಕರಣವಾಗಿದೆ.

 

ಈ ನಡುವೆ ಉಡುಪಿಯಲ್ಲಿ ಐದು ಜನರಿಗೆ ಈ ಸೋಂಕು ಪತ್ತೆಯಾಗಿದ್ದು ಅವರಿಗೆ ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೆ ನಾಲ್ಕು ಮಂದಿ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೋಗ ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here