Friday 14th, May 2021
canara news

ಬೈಕ್ಗೆ ಟಿಪ್ಪರ್ ಢಿಕ್ಕಿ ಸವಾರ ಸಾವು, ಟಿಪ್ಪರ್ ಚಾಲಕ ಪರಾರಿ

Published On : 24 Dec 2016   |  Reported By : Canaranews Network

ಮಂಗಳೂರು: ಮೂಡಬಿದಿರೆ ಶಿರ್ತಾಡಿಯಿಂದ ಗುರುಪುರ ಕೈಕಂಬದಲ್ಲಿ ಮದುವೆ ಸಮಾರಂಭಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ಶಿರ್ತಾಡಿಯ ಸಂತೋಷ್ ರಾಮಣ್ಣ ಪೂಜಾರಿ (25)ಯವರ ಬೈಕ್ಗೆ ಗುರುಪುರ ಕೈಕಂಬದ ಕಡೆಯಿಂದ ಬಂದ ಟಿಪ್ಪರ್ ಗಂಜಿಮಠ ಜಂಕ್ಷನ್ನಲ್ಲಿ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಮೃತ ಸಂತೋಷ್ ಅವರು ಪೈಂಟರ್ಕೆಲಸ ಮಾಡುತ್ತಿದ್ದರು. ಇವರು ಗುರುಪುರ ಕೈಕಂಬದಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಬೈಕ್ನಲ್ಲಿ ತೆರಳುತ್ತಿದ್ದರು. ಗುರುಪುರ ಕೈಕಂಬದಿಂದ ಕಡೆಯಿಂದ ಬಂದ ಮರಳಿನ ಟಿಪ್ಪರ್ ಅವರ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ನ ಹಿಂಬದಿಯ ಚಕ್ರ ಅವರ ತಲೆಯ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ತತ್ಕ್ಷಣ ಟಿಪ್ಪರ್ ಲಾರಿ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಮೂಡಬಿದಿರೆ -ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದ ಈ ಘಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

More News

 ಲಾಕ್‍ಡೌನ್ ಸಮಯದಲ್ಲಿಯೂ ಅಶಕ್ತರಿಗೆ ನೆರವಾಗುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಮಮತಾ ಶೆಟ್ಟಿ
ಲಾಕ್‍ಡೌನ್ ಸಮಯದಲ್ಲಿಯೂ ಅಶಕ್ತರಿಗೆ ನೆರವಾಗುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಮಮತಾ ಶೆಟ್ಟಿ
ಮಹಾ ವಿಕಾಸ್ ಅಘಾಡಿ (ಎಂವಿಎ ಮೈತ್ರಿ) ಸರಕಾರದ ಜನಸ್ಪಂದನೆ
ಮಹಾ ವಿಕಾಸ್ ಅಘಾಡಿ (ಎಂವಿಎ ಮೈತ್ರಿ) ಸರಕಾರದ ಜನಸ್ಪಂದನೆ
ಮಂಗಳೂರು  ವಿಮಾನ ನಿಲ್ದಾಣದಲ್ಲಿ ಆರ್‍ಟಿ-ಪಿಸಿಆರ್ ವಿನÀಃ ಹೊರೆಗೆ ಬಿಡಲಾಗುವುದಿಲ್ಲ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರ್‍ಟಿ-ಪಿಸಿಆರ್ ವಿನÀಃ ಹೊರೆಗೆ ಬಿಡಲಾಗುವುದಿಲ್ಲ

Comment Here