Friday 14th, May 2021
canara news

ಕುಖ್ಯಾತ ಆರೋಪಿ ಪ್ರದೀಪ್ ಮೆಂಡನ್ ಬಂಧನ

Published On : 24 Dec 2016   |  Reported By : Canaranews Network


ಮಂಗಳೂರು: ಹಲವು ಕೊಲೆ ಮತ್ತು ಕೊಲೆ ಯತ್ನ ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 7 ತಿಂಗಳುಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬೇರೆ ವ್ಯಕ್ತಿಯ ಹೆಸರಿನಲ್ಲಿ ಸಿಮ್ ಕಾರ್ಡ್ ಉಪಯೋಗಿಸಿ ತಲೆ ಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಉಡುಪಿ ಅಂಬಲಪಾಡಿ ಮೂಲದ ಪ್ರದೀಪ್ ಮೆಂಡನ್ (46)ನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪ್ರದೀಪ್ ಮೆಂಡನ್ ನಗರದ ಕದ್ರಿ ಪಾರ್ಕ್ ಬಳಿಯ ಗೋರಕ್ಷನಾಥ ಹಾಲ್ ಬಳಿ ಇದ್ದಾನೆ ಎಂಬ ಖಚಿತ ಮಾಹಿತಿ ಅನ್ವಯ ಪೊಲೀಸರು ಡಿ. 21 ರಂದು ಅಲ್ಲಿಗೆ ದಾಳಿ ನಡೆಸಿ ವಶಕ್ಕೆ ಪಡೆದು ಬಂಧಿಸಿದ್ದಾರೆ. ಆತ ಬೇರೆ ವ್ಯಕ್ತಿಗಳ ಹೆಸರಿನಲ್ಲಿದ್ದ ಮೊಬೈಲ್ ಸಿಮ್ಕಾರ್ಡ್ ಉಪಯೋಗಿಸಿದ್ದರಿಂದ ಆತನನ್ನು ಮುಂದಿನ ವಿಚಾರಣೆಗಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.ಪ್ರದೀಪ್ ಮೆಂಡನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 3 ಕೊಲೆ ಪ್ರಕರಣ, 6 ಕೊಲೆ ಯತ್ನ ಪ್ರಕರಣ, 2 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ, ಪಾಸ್ಪೋರ್ಟ್ ಕಾಯ್ದೆ ಪ್ರಕರಣ ದಾಖಲಾಗಿದೆ. ಈ ಪೈಕಿ ಕದ್ರಿ ಠಾಣೆಯಲ್ಲಿ ದಾಖಲಾದ ಬಿಜೈ ರಾಜಾ ಕೊಲೆ ಪ್ರಕರಣ,

ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಹಾಗೂ ಬೆಂಗಳೂರಿನ ದೇವನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪಾಸ್ಪೋರ್ಟ್ ಕಾಯ್ದೆ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದನು. ಸಿಸಿಬಿ ಇನ್ಸ್ಪೆಕ್ಟರ್ ಸುನಿಲ್ ವೈ. ನಾಯ್ಕ ಮತ್ತು ಪಿಎಸ್ಐ ಶ್ಯಾಂ ಸುಂದರ್ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 
More News

 ಲಾಕ್‍ಡೌನ್ ಸಮಯದಲ್ಲಿಯೂ ಅಶಕ್ತರಿಗೆ ನೆರವಾಗುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಮಮತಾ ಶೆಟ್ಟಿ
ಲಾಕ್‍ಡೌನ್ ಸಮಯದಲ್ಲಿಯೂ ಅಶಕ್ತರಿಗೆ ನೆರವಾಗುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಮಮತಾ ಶೆಟ್ಟಿ
ಮಹಾ ವಿಕಾಸ್ ಅಘಾಡಿ (ಎಂವಿಎ ಮೈತ್ರಿ) ಸರಕಾರದ ಜನಸ್ಪಂದನೆ
ಮಹಾ ವಿಕಾಸ್ ಅಘಾಡಿ (ಎಂವಿಎ ಮೈತ್ರಿ) ಸರಕಾರದ ಜನಸ್ಪಂದನೆ
ಮಂಗಳೂರು  ವಿಮಾನ ನಿಲ್ದಾಣದಲ್ಲಿ ಆರ್‍ಟಿ-ಪಿಸಿಆರ್ ವಿನÀಃ ಹೊರೆಗೆ ಬಿಡಲಾಗುವುದಿಲ್ಲ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರ್‍ಟಿ-ಪಿಸಿಆರ್ ವಿನÀಃ ಹೊರೆಗೆ ಬಿಡಲಾಗುವುದಿಲ್ಲ

Comment Here