Thursday 28th, March 2024
canara news

ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ

Published On : 31 Dec 2016   |  Reported By : Canaranews Network


ಮಂಗಳೂರು: ಡಿವೈ‌ಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಅವರ ತಂದೆ, ತಾಯಿ , ಸಹೋದರ ಮತ್ತು ಸಹೋದರಿ ಸೇರಿದಂತೆ ನಾಲ್ವರನ್ನು ಪಿರ್ಯಾದಿದಾರರನ್ನನಾಗಿ ಪರಿಗಣಿಸಬೇಕೆ ಎನ್ನುವುದಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ನ್ಯಾಯಾಲಯದ ವಿಚಾರಣೆ ಜನವರಿ ೨೮ಕ್ಕೆ ಮುಂದೂಡಲ್ಪಟ್ಟಿದೆ.ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಜೆ‌ಎಂಎಫ್‌ಸಿ ನ್ಯಾಯಾಲಯದ ಮುಂದೆ ಪ್ರಕರಣ ನಡೆಯಬೇಕಿತ್ತಾದರು ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು ರಜೆಯಲ್ಲಿರುವುದರಿಂದ ಪ್ರಕರಣವನ್ನು ಅಡಿಷನಲ್ ಜೆ‌ಎಂಎಫ್‌ಸಿಗೆ ವರ್ಗಾಯಿಸಲಾಗಿದೆ.

ಆದರೆ, ಆ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ಬಾಬು ಅವರು ರಜೆಯಲ್ಲಿರುವುದರಿಂದ ಪ್ರಕರಣವನ್ನು ಮುಂದೂಡಲಾಗಿದೆ.ಕಳೆದ ಸೆಪ್ಟೆಂಬರ್ ೨೯ ರಂದು ಡಿವೈ‌ಎಸ್‌ಪಿ ಗಣಪತಿ ಅವರ ಪುತ್ರ ನೇಹಾಲ್ ಗಣಪತಿ ಅವರು, ಪ್ರಕರಣದ ಕುರಿತು ಸಿ‌ಐಡಿ ಸಲ್ಲಿಸಿದ್ದ ‘ಬಿ’ ಶೀಟ್ ವರದಿಗೆ ಸಮ್ಮತಿ ಸೂಚಿಸುವ ಮೂಲಕ ಪ್ರಕರಣದಿಂದ ಹಿಂದಕ್ಕೆ ಸರಿದಿದ್ದರು. ಆದರೆ, ಗಣಪತಿ ಅವರ ತಂದೆ ಕುಶಾಲಪ್ಪ, ತಾಯಿ ಪೆನ್ನಮ್ಮ, ಸಹೋದರ ಮಾಚಯ್ಯ ಮತ್ತು ಸಹೋದರಿ ಸಬಿತಾ ಅವರುಗಳು, ಒಟ್ಟು ಪ್ರಕರಣದಲ್ಲಿ ತಮ್ಮನ್ನು ಪಿರ್ಯಾದಿದಾರರನ್ನಾಗಿ ಪರಿಗಣಿಸುವಂತೆ ವಕೀಲರಾದ ಸುಮಂತ್ ಪಾಲಾಕ್ಷ ಅವರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಪ್ರಕರಣದಲ್ಲಿ ಈ ನಾಲ್ವರನ್ನು ಪಿರ್ಯಾದಿದಾರರನ್ನಾಗಿ ಪರಿಗಣಿಸುತ್ತಾರೋ ಇಲ್ಲವೋ ಎನ್ನುವುದು ಇಂದಿನ ವಿಚಾರಣೆಯಿಂದ ಹೊರಬೀಳಬಹುದೆನ್ನುವ ಕುತೂಹಲ ಮನೆಮಾಡಿತ್ತು. ಇದೀಗ ಈ ಪ್ರಕರಣದ ವಿಚಾರಣೆ ಜನವರಿ ೨೮ಕ್ಕೆ ನಡೆಯಲಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here