Friday 19th, April 2024
canara news

ಸಮಾಜಮುಖಿ ಕಾರ್ಯದಲ್ಲಿ ಸುರತ್ಕಲ್ ಬಂಟರ ಸಂಘ ಮಂಚೂಣಿಯಲ್ಲಿದೆ: ಅಜಿತ್ ರೈ

Published On : 12 Dec 2020   |  Reported By : Rons Bantwal


ಮುಂಬಯಿ (ಆರ್ ಬಿಐ), ಡಿ.11: ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಸುರತ್ಕಲ್ ಬಂಟರ ಸಂಘದ ಸಾಧನೆ ಶ್ಲಾಘನೀಯ. ಬಂಟರ ಸಂಘಗಳ ಪೈಕಿ ಸುರತ್ಕಲ್ ಬಂಟರ ಸಂಘ ಮುಂಚೂಣಿಯಲ್ಲಿದ್ದುಕೊಂಡು ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.

ಬಂಟರ ಮಾತೃಸಂಘದ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಬಂಟ್ಸ್ ಹಾಸ್ಟೆಲ್‌ನ ಶ್ರೀಮತಿ ಗೀತಾ ಎಸ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘದ ಅಭಿನಂದನಾ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ಸುರತ್ಕಲ್ ಬಂಟರ ಸಂಘದ ಕಾರ್ಯ ಚಟುವಟಿಕೆಗಳಿಗೆ ಸದಾ ನೆರವಿನ ಹಸ ನೀಡುತ್ತಿರುವ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಸುರತ್ಕಲ್ ಬಂಟರ ಸಂಘ ಸದಾ ಚಿರಋಣಿಯಾಗಿರುತ್ತದೆ ಎಂದರು. ಸಮಾರಂಭದಲ್ಲಿ ಬಂಟರ ಮಾತೃಸಂಘದ ಕೋಶಾಧಿಕಾರಿ ಕೃಷ್ಣ ಪ್ರಸಾದ್ ರೈ, ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್.ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಸಹ ಸಂಚಾಲಕ ಮುರಳೀಧರ ಶೆಟ್ಟಿ ಎಡಪದವು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಖೇಶ್ ಚೌಟ ಉಳ್ಳಾಲಗುತ್ತು ಕಾರ್ಯಕ್ರಮ ನಿರ್ವಹಿಸಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here