Thursday 28th, March 2024
canara news

ರೂ.1 ಲಕ್ಷ ದೇಣಿಗೆ ನೀಡುವ ಮೂಲಕ ವಿಶಿಷ್ಠವಾಗಿ ಮದುವೆ ವಾರ್ಷಿಕೋತ್ಸವ ಆಚರಿಸಿದ ದಂಪತಿ

Published On : 05 Jun 2021   |  Reported By : Rons Bantwal


ಮುಂಬಯಿ (ಆರ್ ಬಿಐ),ಜೂ.01: ಮಂಗಳೂರು‌ನ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ವೃದ್ದಶ್ರಮಕ್ಕೆ ದೇಣಿಗೆ ನೀಡುವ ಮೂಲಕ ತಮ್ಮ ದಾಂಪತ್ಯ 42ನೇ ವಾರ್ಷಿಕೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.

ದಂಪತಿ ತಮ್ಮ ಮದುವೆಯ ದಿನದ ಸವಿನೆನಪಿಗಾಗಿ ತಮ್ಮ ವೈಯಕ್ತಿಕ ನೆಲೆಯಲ್ಲಿ ಶ್ರೀ ಸಭಾದ ಪುತ್ತೂರಿನ "ಶಿವಸದನ " ವೃದ್ದಶ್ರಮಕ್ಕೆ ರೂ.1,00,000.(ಒಂದು ಲಕ್ಷ ) ದೇಣಿಗೆ ನೀಡಿ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ಇವರ ಈ ಕೊಡುಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್ ಉಪಾಧ್ಯಕ್ಷೆ ಸ್ನೇಹ ಲತಾ ದಿವಾಕರ ಇವರು ಸ್ವೀಕರಿಸಿದರು.

ಇದೇ ವೇಳೆ ದಂಪತಿ ವಿವಾಹ ವಾರ್ಷಿಕೋತ್ಸವ ದಿನವನ್ನು ಹಾರ ಬದಲಾಯಿಸಿ, ರಾಗಿ ಹಾಲುಬಾಯಿ ಕಟ್ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಕೊಡುಗೈ ದಾನಿ ಎಂದೆನಿಸಿದ ಈ ದಂಪತಿ ಮಹಿಳಾ ವೇದಿಕೆ ಸದನ, ಸುರತ್ಕಲ್ ಸ್ಥಾನಿಕ ಸಂಘ, ಅವರು ಕಲಿಸಿದ ಸರಕಾರಿ ಚಿತ್ರಾಪುರ ಶಾಲೆಯ ಮಕ್ಕಳಿಗೆ ಹಲವಾರು ವರ್ಷಗಳಿಂದ ಉಚಿತ ನೋಟ್ ಬುಕ್ ಪುಸ್ತಕ ವಿತರಣೆ ಸೇರಿದಂತೆ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಿಗೆ ಹತ್ತು ಹಲವು ರೀತಿಯಲ್ಲಿ ತನುಮನ ಧನ ಸಹಾಯ ನೀಡುತ್ತಾ ಬಂದಿರುತ್ತಾರೆ.

ಇವರ ಈ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವ ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ್ ಕುಮಾರ್ ಅವರು, ನಿಮ್ಮ ಸೇವಾ ಮನೋಭಾವಕ್ಕೆ ಶ್ರೀ ಸುಬ್ರಹ್ಮಣ್ಯ ಸಭಾ ಮತ್ತು ಮಹಿಳಾ ವೇದಿಕೆಯ ಅಭಿನಂದನೆಗಳು.

ನಿಮಗೆ ಹಾಗೂ ನಿಮ್ಮ ಮಕ್ಕಳಿಗೆ, ಕುಟುಂಬಕ್ಕೆ ದೇವರು ಆಯುರಾರೋಗ್ಯ ಐಶ್ವರ್ಯ ಯಶಸ್ಸು ನೀಡಲಿ. ಇನ್ನೂ ಹೆಚ್ಚಿನ ಸಹಾಯ ನೀಡುವ ಶಕ್ತಿಯನ್ನು ಸುಬ್ರಹ್ಮಣ್ಯ ದೇವರು ನಿಮಗೆ ಅನುಗ್ರಹಿಸಲಿ. ದಾಂಪತ್ಯ ಜೀವನ ಸುವರ್ಣ ಮಹೋತ್ಸವದತ್ತ ಸಾಗಲಿ ಎಂದು ಹಾರೈಸಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here